http://samooha.sanchaya.net

ಸಮೂಹ ಸಂಚಯ, ಸಮುದಾಯದ ಒಗ್ಗಟ್ಟಿನ ಮೂಲಕ ಕನ್ನಡದ ತಾಂತ್ರಿಕ ಬೆಳವಣಿಗೆಗೆ ಆಗಬೇಕಿರುವ ಅನೇಕ ಕೆಲಸಗಳನ್ನು ‘ಕ್ರೌಡ್ ಸೋರ್ಸಿಂಗ್’ ಮೂಲಕ ಸಾಧ್ಯವಾಗಿಸುವ ಒಂದು ವೇದಿಕೆ. ಮೊದಲ ಯೋಜನೆ: ಓಸ್ಮಾನಿಯ ಯುನಿವರ್ಸಿಟಿಯ ಡಿಜಿಟಲ್ ಲೈಬ್ರರಿಯಲ್ಲಿರುವ ೨೦೦೦ಕ್ಕೂ ಹೆಚ್ಚು ಪುಸ್ತಕಗಳ ಹೆಸರು ಇಂಗ್ಲೀಷ್ ನಲ್ಲಿದ್ದು, ಇವುಗಳನ್ನು ಕನ್ನಡೀಕರಿಸುವುದರ ಜೊತೆಗೆ ಯುನಿಕೋಡ್ ಸರ್ಚ್ ಸೌಲಭ್ಯದ ಮೂಲಕ ಈ ಪುಸ್ತಕಗಳನ್ನು ಕನ್ನಡಿಗರಿಗೆ ಸುಲಭವಾಗಿ ಸಿಗುವಂತೆ ಮಾಡುವ ಯೋಜನೆ ಇದಾಗಿದೆ. ಕೇವಲ ಸರ್ಚ್ ಸೌಲಭ್ಯ ಕೊಡುವುದಷ್ಟೇ ಅಲ್ಲದೇ ಈ ಎಲ್ಲ ಪುಸ್ತಕಗಳಿಗೆ ಅವುಗಳದ್ದೇ ಆದ ವಿಕಿ ಪುಟಗಳನ್ನು ಕೂಡ ಕನ್ನಡ ವಿಕಿಪೀಡಿಯದಲ್ಲಿ ಹೆಣೆಯುವಂತೆ ಮಾಡುವುದು, ವಿಕಿಪೀಡಿಯದಲ್ಲಿ ಈಗಾಗಲೇ ಲಭ್ಯವಿಲ್ಲದ ಲೇಖಕ/ಲೇಖಕಿಯರ ಪುಟಗಳು, ಕನ್ನಡ ಪುಸ್ತಕ ಪ್ರಕಾಶಕರ ಪುಟಗಳನ್ನೂ ಸೃಷ್ಟಿ ಮಾಡುವುದು ಇದರಿಂದ ಸಾಧ್ಯವಾಗಲಿದೆ.